ಜಿಲ್ಲಾ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಕುರಿತು ಸಿಎಂ ಮಹತ್ವದ ಸುಳಿವು: ಚುನಾವಣೆ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ತಾಲೂಕು ಚುನಾವಣೆ, ಜಿಲ್ಲಾ ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ: ಲೋಕಸಭೆ ಚುನಾವಣೆ ಫಲಿತಾಂಶ (ಜೂನ್ 4) ಪ್ರಕಟವಾದ ನಂತರ ಆದಷ್ಟು ಬೇಗ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ಸ್ಥಳೀಯ ನಗರ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ. ಚುನಾವಣೆ ನಡೆಸಲು ಸರಕಾರ ಸಿದ್ಧವಿದೆ ಎಂದರು.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಲೋಕಸಭೆ ಚುನಾವಣೆ ನಡೆದ ಬಳಿಕ ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಯೂ ನಡೆಯಲಿದೆ. ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕ್ಷೇತ್ರ ಪುನರ್ವಿಗಂಡಣೆಗೆ ಜನವರಿವರೆಗೆ ಗಡುವು ಇದ್ದು, ನಾವು ಇದನ್ನು ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇವೆ ಮತ್ತು ಅವರು ನಮಗೆ ಏನು ಹೇಳುತ್ತಾರೋ ಅದನ್ನು ಕಾನೂನಿನ ಪ್ರಕಾರ ಮಾಡುತ್ತೇವೆ. ಪುನರ್ ವಿಂಗಡಣೆ ಬಳಿಕ ಮೀಸಲಾತಿ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!