ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ಸಿಎಂ ಪತ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!