Wednesday, August 10, 2022

Latest Posts

ಮೇಕೆದಾಟು ಯೋಜನೆ ಕುರಿತು ಸಿಎಂ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಯಲಿದೆ: ಸಚಿವ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ, ಕಾನೂನು ತಂಡದ ಜೊತೆ ಸಭೆ ನಡೆಯಲಿದೆ ಎಂದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ವಾರಾಂತ್ಯದಲ್ಲಿ ಸಭೆ ನಡೆಯಲಿದೆ. ಸುಪ್ರೀಂ ಕೋರ್ಟ್​​ನಲ್ಲಿ ತಮಿಳುನಾಡಿನ ದಾವೆ ಮಾತ್ರ‌ ಇರುವುದರಿಂದ ಯೋಜನೆ ಅನುಷ್ಠಾನಕ್ಕಾಗಿ ಯಾವ್ಯಾವ ತೀರುವಳಿ ಪಡೆಯಬೇಕು ಎಂಬ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದರು.
ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕ ಗೊತ್ತುಪಡಿಸುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಈ ಬಗ್ಗೆ ಸಿಎಂ ಬಿಎಸ್​​ವೈ ಜತೆಗೆ ಚರ್ಚಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss