ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸ್ಥಾನವನ್ನು ಡಿಕೆಶಿಗೆ ಬಿಟ್ಟುಕೊಡಬೇಕು ಎಂದು ಸಿದ್ದರಾಮಯ್ಯ ಎದುರೇ ಸ್ವಾಮೀಜಿಯೊಬ್ಬರು ಹೇಳಿಕೆ ನೀಡಿದ್ದಾರೆ.
ಎಲ್ಲರೂ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಮಾತನಾಡುವ ವೇಳೆ
ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೇ ಇದ್ದು, ಯಾವ ರಿಯಾಕ್ಷನ್ ಕೂಡ ನೀಡದೇ ಸುಮ್ಮನೆ ಕುಳಿತಿದ್ದರು.