ದಿಗಂತ ವರದಿ ಹುಬ್ಬಳ್ಳಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಿಂದ ತೀರ್ಪು ರಾಜ್ಯಪಾಲರ ಪರವಾಗಿ ಬರಲಿದೆ ಎಂಬ ವಿಶ್ವಾಸ ನಮಗೆ ಇದೆ ಎಂದರು.
ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ಯಾಕೆ ರಾಜೀನಾಮೆ ನೀಡಬೇಕು. ಅವರೇನು ಮುಖ್ಯಮಂತ್ರಿ ಅಥವಾ ಸಚಿವ ಸ್ಥಾನದಲ್ಲಿ ಇದ್ದಾರಾ? ಎಂದು ಸಿಎಂ ಹೇಳಿಕೆ ಟೆಂಗಿನಕಾಯಿ ಹರಿಹಾಯ್ದರು.
ತಮ್ಮ ಬಳಿ ಯಾವ ಪ್ರಕರಣಗಳು ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ವಿರುದ್ಧ ಯಾರೆ ಮಾತನಾಡಿದರು ಅವರ ಪ್ರತಿಕೃತಿ ದಹನ ಮಾಡಲಾಗುತ್ತಿದೆ. ಇದೆಲ್ಲಾ ಏಕೆ ಎಂದು ಕಿಡಿಕಾರಿದರು.