ಹೊಸದಿಗಂತ ವರದಿ ಮಡಿಕೇರಿ:
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಖ್ಯಾತ ಅರ್ಥಶಾಸ್ತ್ರಜ್ಞ, ರಾಜ್ಯಸಭಾ ಸದಸ್ಯ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಹ್ಮಣ್ಯನ್ ಸ್ವಾಮಿ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿ ಕೊಡವರ ಹಕ್ಕುಗಳ ಬಗ್ಗೆ ಚರ್ಚೆ ನಡೆಯಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವರ ಹಕ್ಕುಗಳ ಕುರಿತು ಡಾ.ಸುಬ್ರಹ್ಮಣ್ಯನ್ ಸ್ವಾಮಿ ಅವರೊಂದಿಗೆ ಸಮಾಲೋಚಿಸಿದರು.
ಸಂವಿಧಾನದ 371 ನೇ ವಿಧಿಯಡಿ ಕೊಡವ ಜಿಯೋ-ರಾಜಕೀಯ ಸ್ವಾಯತ್ತತೆ ಸಿಗಬೇಕೆಂದು ಮನವರಿಕೆ ಮಾಡಿಕೊಟ್ಟರು. ನ.26 ರಂದು ಮಡಿಕೇರಿಯಲ್ಲಿ ಸಿಎನ್‍ಸಿ ವತಿಯಿಂದ ನಡೆಯುವ 32ನೇ ವರ್ಷದ ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವಂತೆ ಡಾ.ಸುಬ್ರಹ್ಮಣ್ಯನ್ ಸ್ವಾಮಿ ಅವರಿಗೆ ಆಹ್ವಾನ ನೀಡಿದರು.
ವಿಎಚ್‍ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಜಿ., ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ರೇಣುಕಾ ರವಿ, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಅಜ್ಜಿಕುಟ್ಟೀರ ಲೋಕೇಶ್, ಮದ್ರೀರ ಕರುಂಬಯ್ಯ, ಬೊಟ್ಟಂಗಡ ಗಿರೀಶ್, ಅರೆಯಡ ಗಿರೀಶ್, ಅಲ್ಮಂಡ ಜೈ, ಮಂದಪಂಡ ಮನೋಜ್, ಕಿರಿಯಮಾಡ ಶೆರಿನ್, ಅಪ್ಪಾರಂಡ ಪೂವಣ್ಣ, ಪಟ್ಟಮಾಡ ಅರುಣ್, ಕಲಿಯಂಡ ಪ್ರಧಾನ್ ಸೋಮಯ್ಯ, ಕಲಿಯಂಡ ರವಿ, ಬೊಟ್ಟಂಗಡ ಬೋಪಣ್ಣ ಮತ್ತಿತರರು ನಿಯೋಗದಲ್ಲಿದ್ದರು.
ಈ ಸಂದರ್ಭ ಮಾತನಾಡಿದ ನಾಚಪ್ಪ ಕೊಡವರ ಹಕ್ಕುಗಳು ಮತ್ತು ರಾಜಕೀಯ ಸ್ವಾಯತ್ತತೆ ಕುರಿತು ಡಾ.ಸ್ವಾಮಿ ಪೂರಕ ಸ್ಪಂದನೆ ನೀಡಿದ್ದಾರೆ. ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.