ಒಡಿಶಾದದಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್-ಖಾಸಗಿ ಬಸ್ ಡಿಕ್ಕಿ: ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಝಾರ್ಸುಗುಡಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ.
ಖಾಸಗಿ ಕಂಪನಿಯ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಾಗೂ ಟ್ರಕ್ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.

ಸಂಬಲ್‌ಪುರ-ಜಾರ್ಸುಗುಡ ಬಿಜು ಎಕ್ಸ್‌ಪ್ರೆಸ್‌ವೇನಲ್ಲಿ ಘಟನೆ ನಡೆದಿದೆ. ಕಾರ್ಮಿಕರು ಕೆಲಸ ಮುಗಿಸಿ ಪ್ಲಾಂಟ್ ಸೈಟ್‌ನಿಂದ ಝಾರ್ಸುಗುಡ ಪಟ್ಟಣಕ್ಕೆ ಹಿಂದಿರುಗುತ್ತಿದ್ದರು. ಈ ವೇಳೆ ಝಾರ್ಸುಗುಡ ಬೈಪಾಸ್ ರಸ್ತೆಯ ಪವರ್ ಹೌಸ್ ಚಾಕ್ ಬಳಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!