ಕಲ್ಲಿದ್ದಲು ಹಗರಣ: ಮಮತಾ ಸೋದರಳಿಯ ಅಭಿಷೇಕ್​​ ಬ್ಯಾನರ್ಜಿಗೆ ಇಡಿ ಸಮನ್ಸ್​​​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಲ್ಲಿದ್ದಲು ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್​ನ(ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗು ಸಿಎಂ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್​ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ಜಾರಿ ಮಾಡಿದೆ.

ಶುಕ್ರವಾರ ಬೆಳಿಗ್ಗೆ ಕೋಲ್ಕತ್ತಾದಲ್ಲಿರುವ ಇಡಿ ಕಚೇರಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಮಾತನಾಡಿದ್ದ ಮಮತಾ ಬ್ಯಾನರ್ಜಿ ಕೂಡ ಬಿಜೆಪಿ ಟೀಕಾಪ್ರಹಾರ ನಡೆಸಿದ್ದರು. ಮುಂದಿನ ದಿನಗಳಲ್ಲಿ ಸೋದರಳಿಯ ಅಭಿಷೇಕ್​​ ಹಾಗೂ ಇತರೆ ಹಿರಿಯ ಮುಖಂಡರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಶಂಕಿಸಿದ್ದರು. ಇದೀಗ ಈ ಬೆಳವಣಿಗೆ ನಡೆದಿದೆ.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ಅಭಿಷೇಕ್​ ಮೇಲೆ ಗಂಭೀರ ಆರೋಪವಿದೆ. ಈಗಾಗಲೇ ದೆಹಲಿಯಲ್ಲಿ ಇಡಿ ಕಚೇರಿಯಲ್ಲಿಯೂ ಅವರು ವಿಚಾರಣೆ ಎದುರಿಸಿದ್ದಾರೆ. ಮಾರ್ಚ್​ 21ರಂದು ಸುಮಾರು ತಾಸುಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!