Friday, July 1, 2022

Latest Posts

ಕಲ್ಲಿದ್ದಲು ಕೊರತೆ: ರಾಜ್ಯದ ಹಲವೆಡೆ ಅಘೋಷಿತ ಪವರ್ ಕಟ್!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಪರಿಣಾಮ ಎದುರಾಗಿದ್ದು, ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ.
ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದ ವಿದ್ಯುತ್ ಉತ್ಪಾದನೆ ಕೇಂದ್ರಗಳಲ್ಲಿ ಉತ್ಪಾದನೆ ಕುಸಿತ ಕಂಡಿದೆ.
3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕುಸಿತ ಕಂಡಿದ್ದು, ಬೇಡಿಕೆಯ ಶೇ.30ರಷ್ಟು ಕಲ್ಲಿದ್ದಲು ಮಾತ್ರ ಪೂರೈಕೆಯಾಗುತ್ತಿದೆ.
ಅನಧಿಕೃತವಾಗಿ ಲೋಡ್‌ಶೆಡ್ಡಿಂಗ್ ಆರಂಭವಾಗಿದ್ದು, ಇದರ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ.
ಬೇಡಿಕೆಗೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಹಲವೆಡೆ ಈಗಾಗಲೇ ಪವರ್ ಕಟ್ ಮಾಡಲಾಗುತ್ತಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಸಂಜೆ೬ರಿಂದ ರಾತ್ರಿ ೮ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ.
ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿಯಾಗದಿದ್ದರೂ ಪವರ್ ಕಟ್ ಆರಂಭವಾಗಿದೆ.
ಕಲ್ಲಿದ್ದಲು ಗಣಿಗಳ ಉತ್ಪಾದನೆ ಕುಂಠಿತಗೊಳ್ಳಲು ಮಳೆಯೂ ಪ್ರಮುಖ ಕಾರಣವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss