spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎರಡು ತಿಂಗಳು ಪ್ರವಾಸೋದ್ಯಮ ಸ್ಥಗಿತಕ್ಕೆ ಒಕ್ಕೂಟ ಒತ್ತಾಯ

- Advertisement -Nitte

ಹೊಸ ದಿಗಂತ ವರದಿ ಮಡಿಕೇರಿ:

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗಿನಲ್ಲಿ ಎರಡು ತಿಂಗಳ ಕಾಲ ಪ್ರವಾಸೋದ್ಯಮವನ್ನು ಸಂಪೂರ್ಣ ಸ್ಥಗಿತಗೊಳಿಸಲು ಸೇವ್ ಕೊಡಗು ಫ್ರಮ್ ಟೂರಿಸಂ ಒಕ್ಕೂಟ ಜಿಲ್ಲಾಡಳಿತ ಹಾಗೂ ಸರಕಾರವನ್ನು ಒತ್ತಾಯಿಸಿದೆ.
ಪೊನ್ನಂಪೇಟೆ ಸಮೀಪ ನಡೆದ ‘ಸೇವ್ ಕೊಡಗು ಫ್ರಮ್ ಟೂರಿಸಂ’ ಒಕ್ಕೂಟದ ಎರಡನೇ ಸಭೆಯಲ್ಲಿ ಈ ಮೇಲಿನ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಸದ್ಯದಲ್ಲಿಯೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತಿರ್ಮಾನಿಸಲಾಯಿತು.
ಇದಕ್ಕೂ ಸ್ಪಂದಿಸದಿದ್ದರೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳನ್ನು ತಯಾರಿಸಲು ಚಿಂತನೆ ನಡೆಸಲಾಯಿತು.
ಕೊಡಗಿನ ಮೂಲ ನಿವಾಸಿಗಳು ಹಾಗೂ ಅನಾದಿ ಕಾಲದಿಂದಲೂ ಬದುಕು ಕಟ್ಟಿಕೊಂಡ ಕಾವೇರಿ ಭಕ್ತರ ಪ್ರಮುಖ ಹಬ್ಬಗಳಲ್ಲಿ ಒಂದಾದ ಕಾವೇರಿ ತುಲಾ ಸಂಕ್ರಮಣದ ಹಿತದೃಷ್ಟಿಯಿಂದ ಹಾಗೂ ಇಲ್ಲಿನ ಭಕ್ತರ ಆರೋಗ್ಯ ದೃಷ್ಟಿಯಿಂದ ಮತ್ತು ಇದೀಗ ತಾನೇ ಆರಂಭವಾದ ಶಾಲಾ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೊಡಗಿನಲ್ಲಿ ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಸಭೆ ಒತ್ತಾಯಿಸಿತು.
ನೆರೆ ರಾಜ್ಯ ಕೇರಳದಲ್ಲಿ ಅಧಿಕವಾಗುತ್ತಿರುವ ಕೊರೋನಾ ಸೋಂಕು ಹಾಗೂ ನಿಫಾ ವೈರಸ್ ಕೊಡಗಿನ ಮೇಲೆ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಹಾಗೂ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬೀರಬಹುದೆಂಬ ತಜ್ಞರ ವರದಿಯನ್ನು ಆಧಾರವಾಗಿಟ್ಟುಕೊಂಡು ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮದೊಂದಿಗೆ ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಡಲು ಜಿಲ್ಲಾಡಳಿತವನ್ನು ಒತ್ತಾಯಿಸಲು ಸಭೆ ತಿರ್ಮಾನಿಸಿತು.
ಸ್ಥಳೀಯ ಮೂಲ ನಿವಾಸಿಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಕಾವೇರಿ ತುಲಾ ಸಂಕ್ರಮಣದ ತಿರ್ಥೋದ್ಭವದ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇದೀಗ ಕೊರೋನಾ ಸಂಕಷ್ಟ ಕಾಲವಾಗಿರುವ ಕಾರಣ ಕಳೆದ ವರ್ಷ ಹೊರಗಿನ ಭಕ್ತರನ್ನು ತಡೆಹಿಡಿಯಲಾಗಿತ್ತು. ಇದರ ಜೊತೆಗೆ ಸ್ಥಳೀಯ ಭಕ್ತರನ್ನು ಕೂಡ ತಡೆದು ಗೊಂದಲ ಸೃಷ್ಟಿಯಾಗಿತ್ತು. ಈ ವರ್ಷ ಕೂಡ ಕೊರೋನಾ ಸೋಂಕು ಅಧಿಕವಾಗಿ ಸ್ಥಳೀಯರಿಗೆ ಗೊಂದಲ ಉಂಟಾಗಬಾರದು ಎಂಬ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ ಒಂದರಿಂದ ಪ್ರವಾಸಿಗರು ಜಿಲ್ಲೆಗೆ ಬರುವುದನ್ನು ತಡೆಯಬೇಕಿದೆ ಹಾಗೂ ತುಲಾ ಸಂಕ್ರಮಣದಿಂದ ಕಿರು ಸಂಕ್ರಮಣದವರೆಗೂ ಅಂದರೆ ಅಕ್ಟೋಬರ್ ಹಾಗೂ ನವೆಂಬರ್ ಎರಡು ತಿಂಗಳು ಸಂಪೂರ್ಣ ಪ್ರವಾಸೋದ್ಯಮವನ್ನು ಸ್ಥಗಿತಗೊಳಿಸುವ ಮೂಲಕ ಸ್ಥಳೀಯ ನಿವಾಸಿಗಳ ಧಾರ್ಮಿಕ ಕಟ್ಟುಪಾಡುಗಳನ್ನು ಆಚರಿಸಲು ಅವಕಾಶ ಮಾಡಿಕೊಡಬೇಕೆಂದು ಸಭೆ ಒತ್ತಾಯಿಸಿತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss