ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಹಲವು ದಿನಗಳಿಂದ ಮಳೆಯಾಗುತ್ತಿದೆ, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.