August 30, 2026
Sunday, August 30, 2026
spot_img

ನಿರಂತರ ಮಳೆಗೆ ತಟಸ್ಥವಾದ ಕರಾವಳಿ: ಉಡುಪಿ, ಚಿಕ್ಕಮಗಳೂರಿಗೆ ಆರೆಂಜ್‌ ಅಲರ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ದಕ್ಷಿಣ ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀವ್ರಗೊಂಡಿದ್ದು, ಮುಂಬರುವ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

13 ಜಿಲ್ಲೆಗಳಿಗೆ ಸಾಧಾರಣ ಮಳೆ ಸೂಚನೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ.

ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ವಿಶೇಷವಾಗಿ ಉಡುಪಿ ಹಾಗೂ ಚಿಕ್ಕಮಗಳೂರಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಂಗಳೂರಿನ ಹಲವೆಡೆ ಭೂಕುಸಿತ ಸಂಭವಿಸಿದ್ದು, ಕರಾವಳಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !