ಮುಂದಿನ 24 ಗಂಟೆಯಲ್ಲಿ ಕರಾವಳಿಯಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗುವ (Rain Update) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲವು ಭಾಗದಲ್ಲಿ ಗುಡುಗು, ಮಿಂಚು ಸಹಿತ (Karnataka rain news) ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ ಮತ್ತು ದಾವಣಗೆರೆ, ಚಿತ್ರದುರ್ಗ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿದಂತೆ ಯಾದಗಿರಿ, ರಾಯಚೂರು, ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ಹೊತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!