ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2,000 ಕೋಟಿ ರೂ. ಮೌಲ್ಯದ 500 ಕೆಜಿ ಕೊಕೇನ್‍ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಡ್ರಗ್ಸ್ ಸ್ಮಗ್ಲಿಂಗ್ ತಂಡ ಈ ಬೃಹತ್ ಕೊಕೇನ್ ರವಾನೆಯ ಹಿಂದೆ ಇದೆ ಎಂದು ಪೊಲೀಸರು ಶಂಕಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.
ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ಭಾನುವಾರ 400 ಗ್ರಾಂ ಹೆರಾಯಿನ್ ಮತ್ತು 160 ಗ್ರಾಂ ಕೊಕೇನ್ ವಶಪಡಿಸಿಕೊಂಡು ಇಬ್ಬರು ಅಫ್ಘಾನಿಸ್ತಾನ ಪ್ರಜೆಗಳನ್ನು ಬಂಧಿಸಲಾಗಿತ್ತು. ಇದಾದ ನಂತರ ಮಾದಕ ವಸ್ತುಗಳ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದರು. ಇದೀಗ ಬೃಹತ್ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ.