ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 40 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಮಾದಕ ದ್ರವ್ಯ ಸಾಗಾಣಿಕೆ ಪತ್ತೆಯಾಗಿದೆ. ದೋಹಾ (ಕತಾರ್) ದಿಂದ ಬೆಂಗಳೂರಿಗೆ ಆಗಮಿಸಿದ್ದ ಭಾರತ ಮೂಲದ ವ್ಯಕ್ತಿಯೊಬ್ಬನ ಬಳಿ ಇದ್ದ ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಡೈರೆಕ್ಟರ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಆ ವ್ಯಕ್ತಿಯ ಚಲನವಲನಗಳ ಮೇಲೆ ಅನುಮಾನಗೊಂಡ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ, ಬ್ಯಾಗಿನೊಳಗೆ ಎರಡು ಕಾಮಿಕ್ಸ್ ಪುಸ್ತಕಗಳು ಸಿಕ್ಕಿವೆ. ಆದರೆ ಅವು ಸಾಮಾನ್ಯ ಪುಸ್ತಕಗಳಂತಿಲ್ಲ. ಆ ಪುಸ್ತಕಗಳ ಕವರ್ ಮೇಲೆ ಸೀಲ್ ಮಾಡಿದ್ದ ರೀತಿ ಅನುಮಾನ ಮೂಡಿಸಿದ್ದರಿಂದ ವಿವರವಾದ ತಪಾಸಣೆ ನಡೆಸಿದ ಅಧಿಕಾರಿಗಳಿಗೆ, ಅದರ ಒಳಗೆ 4 ಕೆಜಿ ಕೊಕೇನ್ ತುಂಬಲಾಗಿರುವುದು ಬೆಳಕಿಗೆ ಬಂದಿದೆ.

DRI ಅಧಿಕಾರಿಗಳು ತಕ್ಷಣವೇ ಎನ್‌ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ & ಸೈಕೊಟ್ರೋಪಿಕ್ ಸಬ್‌ಸ್ಟಾನ್ಸಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!