September 16, 2026
Wednesday, September 16, 2026
spot_img

ನೀತಿ ಸಂಹಿತೆ ಉಲ್ಲಂಘನೆ ಕೇಸ್: ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

2018ರಚುನಾವಣೆಯ ಸಂದರ್ಭ ಬಾಲಕೃಷ್ಣ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಅಬಕಾರಿ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಶಾಸಕರು ಸತತವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದು, ಈ ಹಿನ್ನೆಲೆ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !