ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಬಿಎಸ್‌ವೈ ಜಾರಿಗೊಳಿಸಿದ್ದ ಭಾಗ್ಯಲಕ್ಷ್ಮಿ ಯೋಜನೆಯನು ಕೈ ಬಿಡಲಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಭಾಗ್ಯಲಕ್ಷ್ಮಿ ಯೋಜನೆಯನ್ನು ಮುಂದುವರೆಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.
ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಆರ್ಹರಿದ್ದರು. 18ವರ್ಷ ಪೂರ್ಣಗೊಂಡ ನಂತರ ಉನ್ನತ ವಿದ್ಯಾಭ್ಯಾಸಕ್ಕೆ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗ ಹಿಂಪಡೆಯಲು ಅವಕಾಶವಿತ್ತು.