ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮತ್ತೆ ಚಳಿಯ ಅನುಭವವಾಗುತ್ತಿದೆ. ಚಂಡಮಾರುತದಿಂದಾಗಿ ಒಂದೊಂದು ದಿನ ಒಂದೊಂದು ಬಗೆಯ ವಾತಾವರಣವಿರುತ್ತಿತ್ತು. ಇದೀಗ ಜನವರಿ 20ರಿಂದಲೇ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬಂದಿದೆ.ಸಿಕ್ಕಾಪಟ್ಟೆ ಚಳಿಯ ಜೊತೆಗೆ ಸೂರ್ಯನ ಬೆಚ್ಚಗಿನ ಕಿರಣಗಳು ಭೂಮಿಯನ್ನು ತಾಕಲಿವೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿ ಇದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಚಳಿ ಇದೆ.
ಬೀದರ್ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಇಲ್ಲ. ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.