ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಎಂದಿನಂತೆ ಚಳಿಯ ವಾತಾವರಣ ಇರಲಿದೆ. ಆದರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿಗಾಲದ ಹೊತ್ತಲ್ಲೂ ಬಿರು ಬಿಸಿಲು ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಸಾಮಾನ್ಯವಾಗಿ ಫೆಬ್ರವರಿಯಲ್ಲಿ 25 ರಿಂದ 26 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿತ್ತು. ಆದರೆ ಈ ಬಾರಿ 30 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ.
ಈ ಬಾರಿ ಬೇಸಿಗೆಗೂ ಮುನ್ನವೇ ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ತಾಪಮಾನ ಹೆಚ್ಚಳವಾಗಿದೆ. ಕಳೆದ ಒಂದು ವಾರದಿಂದ 30 ಡಿಗ್ರಿ ಆಸುಪಾಸಿನಲ್ಲಿರುವ ಉಷ್ಣಾಂಶ ದಾಖಲಾಗಿದ್ದು, ಚಳಿಗಾಲ ಮುಕ್ತಾಯಕ್ಕೂ ಮುನ್ನವೇ ಬೆಂಗಳೂರಿಗರಿಗೆ ಬಿಸಿಲೇಟು ತಟ್ಟಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.