ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುದುಚೆರಿಯಲ್ಲಿ ಶಾಲಾ ಮಕ್ಕಳಲ್ಲಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಶಾಲೆಗೆ ರಜೆ ನೀಡಲಾಗಿದೆ.
ಇಂದಿನಿಂದ ಸೆ.25 ರವರೆಗೆ, 1-8ನೇತರಗತಿ ವರೆಗಿನ ಮಕ್ಕಳಿಗೆ ಸರ್ಕಾರ ರಜೆ ಘೋಷಿಸಿದೆ. ಕಳೆದ 10ದಿನಗಳಿಂದ ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಶಾಲೆ ಮುಚ್ಚುವ ನಿರ್ಧಾರಕ್ಕೆ ಬರಲಾಗಿದೆ.
ಪುದುಚೆರಿ ಮತ್ತು ಕಾರೈಕಲ್ ಪ್ರದೇಶದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿ.ಜಿ. ಶಿವಗಾಮಿ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿದ್ದಾರೆ.
ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಇಲಾಖೆ ನಿರ್ಧರಿಸಿದೆ.