ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER | ರಾಜ್ಯಾದ್ಯಂತ ಚಳಿ-ಮಂಜಿನ ವಾತಾವರಣ, ಮಳೆನೂ ಬರತ್ತಂತೆ!

