Friday, November 14, 2025

WEATHER | ರಾಜ್ಯದಲ್ಲಿ ಬೆಳಗ್ಗೆ-ಸಂಜೆ ಚಳಿ🥶, ಮಧ್ಯಾಹ್ನ ಸುಡುಬಿಸಿಲು☀️


ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿ ಇರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಮಂಜಾನೆ ಮತ್ತು ಸಂಜೆ ಚಳಿ ಇರಲಿದ್ದು, ಅಲ್ಲಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!