ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿತ: ಸಾವಿನ ಸಂಖ್ಯೆ 11 ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, ಮೃತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 21 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ. ಗುರುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆಯೇ ಚಂದೌಸಿ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿತ್ತು, ಎರಡು ದಿನಗಳ ರಕ್ಷಣ ಕಾರ್ಯಾಚರಣೆಯಲ್ಲಿ 21 ಮಂದಿಯನ್ನು ರಕ್ಷಿಸಲಾಗಿದೆ, ಇನ್ನೂ ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಿಸಿದ ಜನರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ೫೦ ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!