Monday, July 4, 2022

Latest Posts

ಸಿಲಿಕಾನ್ ಸಿಟಿಗೆ ತಂಪೆರೆದ ವರುಣ: ತಗ್ಗು ಪ್ರದೇಶಗಳಲ್ಲಿ ಹರಿದುಬಂದ ನೀರು

ಹೊಸದಿಗಂತ ಡಿಜಟಲ್‌ ಡೆಸ್ಕ್

ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ ಇಂದು ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಸುರಿದಿದೆ.
ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಪ್ರಾರಂಭವಾಗಿದೆ. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.
ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ಮಲ್ಲೇಶ್ವರಂ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.
ಜಡಿಮಳೆಗೆ ಮಲ್ಲೇಶ್ವರಂ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೆಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು ಕಂಡು ಬಂತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss