ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ಮುಖ್ಯವಾಗಿ ಬೀದರ್, ಕಲಬುರಗಿ, ವಿಜಯಪುರದಲ್ಲಿ ಶೀತಗಾಳಿ ಬೀಸಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

