ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಏನು ಮಾಡಬಹುದು?
ತೀರಾ ಅವಶ್ಯಕತೆ ಇದ್ದಲ್ಲಿ ಮಾತ್ರ ಮನೆಯಿಂದ ಹೊರಗೆ ಹೋಗಿ ಇಲ್ಲವಾದರೆ ಮನೆಯಲ್ಲಿಯೇ ಇರಿ
ಮಕ್ಕಳಿಗೆ ಸಾಕ್ಸ್ ಹಾಗೂ ಮಿಟನ್ಸ್ ಹಾಕಿ
ಸ್ವೆಟರ್, ಹೀಟಿಂಗ್ ಬಟ್ಟೆಗಳನ್ನು ಬಳಸಿ, ಬೆಚ್ಚಗಿನ ಬ್ಲಾಂಕೆಟ್ ಯೂಸ್ ಮಾಡಿ
ಆಗಾಗ ಬಿಸಿ ದ್ರವ ಪದಾರ್ಥ ಸೇವಿಸಿ, ಬಿಸಿ ನೀರನ್ನು ರೂಢಿ ಮಾಡಿ
ಕಿವಿಗೆ ಹತ್ತಿ ಇಟ್ಟುಕೊಳ್ಳುವುದನ್ನು ಮರೆಯಬೇಡಿ