ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತ ಅಲೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ವಿಜಯಪುರ, ಕಲಬುರಗಿ, ಬೀದರ್ನಲ್ಲಿ ಚಳಿ ಹೆಚ್ಚಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರ ಬಳಿಕ ಮಳೆಯಾಗಲಿದೆ.
ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆ ಇರಲಿದ್ದು, ತಾಪಮಾನವು 6-7 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೀದರ್ನಲ್ಲಿ 7.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.