ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಡಿಸೆಂಬರ್, ಜನವರಿ ಅಂತ್ಯವರೆಗೆ ಚಳಿಯ ಅಬ್ಬರ ಜೋರಾಗಿರಲಿದ್ದು, ವಾಡಿಕೆಗಿಂತ 2-3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.