ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಹೆಚ್ಚಾಗಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರೆಯಲಿದೆ. ಅಲ್ಲಲ್ಲಿ ತಣ್ಣನೆಯ ಗಾಳಿ ಬೀಸಲಿದೆ. ಅಲ್ಲದೇ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.