ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದ್ದಂತೆ, ಚಳಿ ನಿಧಾನವಾಗಿ ಆರಂಭಗೊಂಡಿವೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಮತ್ತು ಸಂಜೆಯ ವೇಳೆಗೆ ಚಳಿ ಆರಂಭವಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಕೆಲವೆಡೆ ಸಂಜೆಯ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ಮಧ್ಯ ಕರ್ನಾಟಕದ ಹಲವೆಡೆ ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಣ್ಣ ಮಳೆಯ ಸಾಧ್ಯತೆ ಇದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳವರೆಗೂ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಮಧ್ಯಾಹ್ನ ಬಿಸಿಲು ತೀವ್ರವಾಗಬಹುದು, ಆದರೆ ಸಂಜೆಯ ವೇಳೆಗೆ ಗಾಳಿ ತಂಪಾಗುವ ಸಾಧ್ಯತೆ ಇದೆ.
ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಮತ್ತು ಕನಿಷ್ಠ 18 ಡಿಗ್ರಿ ದಾಖಲಾಗಲಿದೆ. ಮೈಸೂರಿನಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 21 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

