ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಚಳಿ ಆರಂಭಗೊಂಡಿದೆ. ಇದರ ನಡುವೆಯೇ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.