January15, 2026
Thursday, January 15, 2026
spot_img

WEATHER | ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯ ಜೋಪಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ ಹವಾಮಾನವಿರುತ್ತದೆ. ಮಳೆ ಬರುವ ಸಾಧ್ಯತೆ ತೀರಾ ಕಡಿಮೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಭಾಗಗಳಲ್ಲಿ ಕನಿಷ್ಠ ತಾಪಮಾನವು ವಾಡಿಕೆಗಿಂತ ಕಡಿಮೆಯಾಗಲಿದೆ. ಇನ್ನು ಹೊನ್ನಾವರ, ಮಂಗಳೂರು ಮತ್ತು ಕಾರವಾರ ಭಾಗಗಳಲ್ಲಿ ಶುಷ್ಕ ಹವಾಮಾನವಿದ್ದು, ಗರಿಷ್ಠ ತಾಪಮಾನವು 33°C – 35°C ರವರೆಗೆ ದಾಖಲಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದ್ದು, ರಾತ್ರಿಯ ಸಮಯದಲ್ಲಿ ಚಳಿ ಹೆಚ್ಚಿರಲಿದೆ.

Most Read

error: Content is protected !!