ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ