ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಮೈಕೊರೆಯುವಂತಹ ಚಳಿಯಿಂದಾಗಿ ಜನರು ಬೆಳ್ಳಂ ಬೆಳಗ್ಗೆ ಮನೆಯಿಂದ ಹೊರಗೆ ಬರುತ್ತಿಲ್ಲ.
ಶನಿವಾರ ಸಹ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ತಣ್ಣನೆಯ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನ ಉತ್ತರ ಕರ್ನಾಟಕದ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಆವರಿಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಮತ್ತು ಕನಿಷ್ಠ 16, ಬೀದರ್ನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 13, ಕಲಬುರಗಿ ಗರಿಷ್ಠ 31 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.