ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದೆಲ್ಲೆಡೆ ಚಳಿಯ ಜೊತೆ ಶೀತಗಾಳಿ ಬೀಸುತ್ತಿದೆ. ಮೂರು ನಾಲ್ಕು ದಿನಗಳಿಂದ ಶೀತಗಾಳಿಗೆ ಹೈರಾಣಾದ ಜನರಿಗೆ ನೆಗಡಿ, ಥಂಡಿ, ಕೆಮ್ಮು ಬಾಧಿಸುತ್ತಲೇ ಇದೆ.
ಇನ್ನೂ ಎರಡು ದಿನ ಇದೇ ವಾತಾವರಣ ಮುಂದುವರಿಯಲಿದ್ದು, ಇದರ ಜೊತೆಗೆ ಮಳೆಯೂ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವಡೆ ಮುಂದಿನ 24 ತಾಸುಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯೆಸ್ ಅಧಿಕವಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25, ಕನಿಷ್ಠ 18 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಇರಲಿವೆ.
ಎಲ್ಲೆಲ್ಲಿ ಮಳೆ?
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ಮೈಸೂರಿನಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.