ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀತಗಾಳಿ ಹೆಚ್ಚಳ: ಶಾಲಾಗಳ ರಜೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚುತ್ತಿದ್ದು, ಈ ಹಿನ್ನೆಲೆ ಪ್ರಾಥಮಿಕ ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ.

5ನೇ ತರಗತಿವರೆಗೆ ಚಳಿಗಾಲದ ರಜೆಯನ್ನು ಜನವರಿ 12ರವರೆಗೆ ವಿಸ್ತರಿಸಲಾಗಿದೆ ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಹೇಳಿದ್ದಾರೆ.
ಜ.8ರಿಂದ (ಸೋಮವಾರ) ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗಿರುವುದರಿಂದ ರಜೆಯನ್ನು ವಿಸ್ತರಿಸಲಾಗಿದೆ.

ದೆಹಲಿ ನಗರದಾದ್ಯಂತ ಮುಂದಿನ ಕೆಲವು ದಿನಗಳವರೆಗೆ ದಟ್ಟವಾದ ಮಂಜು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!