ಕುಸಿದ ಹೈದರಾಬಾದ್: ಮುಂಬೈ ಗೆಲುವಿಗೆ 174 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಮುಂಬೈ ಇಂಡಿಯನ್ಸ್ ಬೌಲರ್‌ಗಳ ಶಿಸ್ತುಬದ್ದ ದಾಳಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದೆ. 8 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದು, ಆತಿಥೇಯ ಮುಂಬೈಗೆ ಸ್ಪರ್ಧಾತ್ಮಕ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ 5.5 ಓವರ್‌ಗಳಲ್ಲಿ 56 ರನ್‌ಗಳ ಜತೆಯಾಟವಾಡಿತು.

ಅಭಿಷೇಕ್ ಶರ್ಮಾ ಕೇವಲ 11 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಇನ್ನು ಅಭಿಷೇಕ್ ರೆಡ್ಡಿ ಬದಲು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನಗಿಟ್ಟಿಸಿಕೊಂಡ ಮಯಾಂಕ್ ಅಗರ್‌ವಾಲ್ ಕೇವಲ 5 ರನ್ ಗಳಿಸಿ ಅನ್ಸೂಲ್ ಕಂಬೋಜ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟಿಂಗ್ ನಡೆಸಿದ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 48 ರನ್ ಬಾರಿಸಿ ಪೀಯೂಸ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ನಿತೀಶ್ ರೆಡ್ಡಿ 20 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಅಪಾಯಕಾರಿ ಬ್ಯಾಟರ್ ಹೆನ್ರಿಚ್ ಕ್ಲಾಸೇನ್(2) ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಅನುಭವಿ ಲೆಗ್‌ಸ್ಪಿನ್ನರ್ ಜಾವ್ಲಾ ಯಶಸ್ವಿಯಾದರು.

6ನೇ ವಿಕೆಟ್‌ಗೆ ಮಾರ್ಕೊ ಯಾನ್ಸೆನ್ ಹಾಗೂ ಶಹಬಾಜ್ ಅಹಮದ್ ಕೊಂಚ ಆಸರೆಯಾಗುವ ಯತ್ನ ನಡೆಸಿದರು. ಆದರೆ ಶಹಬಾಜ್ 10 ರನ್ ಬಾರಿಸಿ ಪಾಂಡ್ಯ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಾರ್ಕೊ ಯಾನ್ಸೆನ್ 17 ರನ್ ಸಿಡಿಸಿ ಪಾಂಡ್ಯಗೆ ಮೂರನೇ ಬಲಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!