ಶಾಲೆಗಳ ಶ್ರೇಯೋಭಿವೃದ್ಧಿಗಾಗಿ 100 ರೂ ದೇಣಿಗೆ ಸಂಗ್ರಹ: ಸುತ್ತೋಲೆ ಹಿಂಪಡೆದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್‌

ಶಾಲೆಗಳ ಶ್ರೇಯೋಭಿವೃದ್ಧಿಗಾಗಿ 100 ರೂ ದೇಣಿಗೆ ಸಂಗ್ರಹಕ್ಕೆ ಅನುಮತಿ ನೀಡಿ ಸುತ್ತೋಲೆಯನ್ನು ಹಿಂಪಡೆದಿದೆ.
ಶಿಕ್ಷಣ ಇಲಾಖೆಯ ಆಯುಕ್ತರು ಎಸ್ ಡಿ ಎಂ ಸಿಗೆ 100 ರೂ ದೇಣಿಗೆ ಸಂಗ್ರಹಕ್ಕೆ ಆದೇಶ ಹೊರಡಿಸಿದ್ದರು. ಈ ಆದೇಶ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳ ನಾಯಕರು ಗುಡುಗಿದ್ದರು.
ಇದೀಗ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಶಿಕ್ಷಣ ಸಚಿವರ ಸೂಚನೆಯ ಮೇರೆಗೆ, 100 ರೂ ದೇಣಿಗೆ ಸಂಗ್ರಹದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!