ಜ.12 ರವರೆಗೆ ಹರಿಯಾಣದಲ್ಲಿ ಕಾಲೇಜ್ ಬಂದ್: ಎಂದಿನಂತೆ ನಡೆಯಲಿವೆ ಆನ್‌ಲೈನ್ ಕ್ಲಾಸ್ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಇದರ ಜತೆಗೆ ಒಮಿಕ್ರಾನ್ ಪ್ರಕರಣವೂ ಸೇರಿದ್ದು, ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿದೆ.
ಇದರ ಬೆನ್ನಲ್ಲೇ ಹರಿಯಾಣದಲ್ಲಿ ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಭೌತಿಕ ತರಗತಿಯನ್ನು ಜನವರಿ 12 ರವರೆಗೆ ನಿರ್ಬಂಧಿಸಲಾಗಿದೆ.

ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಆನ್‌ಲೈನ್ ತರಗತಿಗಳು ಮುಂದುವರಿಯಲಿವೆ ಎಂದು ಹರಿಯಾಣ ಶಿಕ್ಷಣ ಇಲಾಖೆ ತಿಳಿಸಿದೆ. ಅಧಿಕೃತ ಆದೇಶ ಹೊರಬಿದ್ದಿದ್ದು, ಜನವರಿ 12 ರವರೆಗೆ ತರಗತಿಗಳು ಮುಚ್ಚಿರಲಿವೆ. ಆದರೆ ಸಿಬ್ಬಂದಿ ಮಾತ್ರ ಎಂದಿನಂತೆ ವಿಶ್ವವಿದ್ಯಾಲಯಕ್ಕೆ ಬರಬೇಕು. ಅಲ್ಲದೇ ಆನ್‌ಲೈನ್ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಲಾಗಿದೆ.

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ವೇಗವಾಗಿ ಸೋಂಕು ಹರಡುವ ಭೀತಿ ಇದೆ. ಈ ಕಾರಣದಿಂದ ಭೌತಿಕ ತರಗತಿಗಳನ್ನು ಬಂದ್ ಮಾಡಲಾಗಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಹಾಸ್ಟೆಲ್‌ಗಳಲ್ಲಿ ಉಳಿಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!