ಜಲಾವೃತಗೊಂಡ ಬೈಪಾಸ್‌ನಲ್ಲಿ ಸಿಲುಕಿಕೊಂಡ ಕಾಲೇಜ್​​ ಬಸ್: ವಿದ್ಯಾರ್ಥಿಗಳ ರಕ್ಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನಲ್ಲಿ ಬಿಪರ್​ಜಾಯ್ ಚಂಡಮಾರುತ ಅಪ್ಪಳಿಸಿದ ನಂತರ ರಾಜ್ಯದ ಅನೇಕ ಕಡೆ ಜೂ. 24 ರಂದು ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದೆ.  ಜೊತೆಗೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಖೇಡಾ ಜಿಲ್ಲೆಯ ನಾಡಿಯಾಡ್ ಪ್ರದೇಶದ ಬೈಪಾಸ್‌
ಮಳೆ ನೀರಿನಿಂದ ತುಂಬಿಕೊಂಡಿದ್ದು, ಈ ಬೈಪಾಸ್‌ನಲ್ಲಿ ಮಕ್ಕಳಿದ್ದ ಕಾಲೇಜು ಬಸ್‌ ಸಿಲುಕಿಕೊಂಡಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು ಬಸ್ಸಿನಲ್ಲಿದ್ದ ಎಲ್ಲ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

ವಿದ್ಯಾರ್ಥಿಗಳನ್ನು ಬಸ್ಸಿನ ಕಿಟಕಿಯ ಮೂಲಕ ಹೊರಗೆ ತರಲಾಗಿದೆ. ಈ ಕಾರ್ಯಚರಣೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ ,  ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಒಂದು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.

https://twitter.com/ANI/status/1672509635042099200?ref_src=twsrc%5Etfw%7Ctwcamp%5Etweetembed%7Ctwterm%5E1672509635042099200%7Ctwgr%5E9b5bdc64dc05fb61a8a844ecb24217da00ca09ee%7Ctwcon%5Es1_&ref_url=https%3A%2F%2Ftv9kannada.com%2Fnational%2Fvideo-viral-college-bus-stuck-in-flooded-bypass-students-rescued-through-window-national-news-akp-608247.html

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!