ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಪ್ರಿಯಕರನಿಂದ ವಂಚನೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದ್ದು, ವಿದ್ಯಾರ್ಥಿನಿಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ನಡೆದಿದೆ.
ಆಶಾ (20) ಸಾವನ್ನಪ್ಪಿದ ಯುವತಿ. ಬೇಲೂರು ನಗರದ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದ ಆಶಾ ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಮಂಜುನಾಥ ಇಬ್ಬರೂ ಪ್ರೀತಿಸುತ್ತಿದ್ದರು. ಆಶಾಳನ್ನೂ ನಂಬಿಸಿ ಸುತ್ತಾಡಿ ಮಂಜುನಾಥ್ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಮನನೊಂದು ಯುವತಿ ಅ.6ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೂಡಲೇ ಆಶಾಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾಳೆ.
ಆಶಾ ತಂದೆ ರಾಮಯ್ಯ ಅವರು ಮಂಜುನಾಥನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಬೇಲೂರು ಠಾಣೆ ಪೊಲೀಸರು ತನಿಖೆ ಕೈಗೆತ್ತುಕೊಂಡಿದ್ದಾರೆ.