ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ಆವರಣದಲ್ಲೇ ನೇಣು ಬಿಗಿದುಕೊಂಡು ಪ್ರಿನ್ಸಿಪಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ.
ಹುನಗುಂದ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲ್ ನಾಗರಾಜ ಮುದಗಲ್ (56) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಇಂದು ಕಾಲೇಜಿನಲ್ಲಿ “ಜಾನಪದ ಜಾತ್ರೆ ಹೊನ್ನ ಸಂಭ್ರಮ ಎಂಬ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮದ ನಿಮಿತ್ತ ನಿನ್ನೆ ವಿವಿಧ ಕಡೆ ತೆರಳಿ ಆಮಂತ್ರಣ ಕೊಟ್ಟು ಬಂದಿದ್ದ ಪ್ರಿನ್ಸಿಪಾಲ್, ಇಂದು ಬೆಳಗಿನ ಜಾವ ಕಾಲೇಜಿನ ಆವರಣದಲ್ಲಿರುವ ಕ್ಯಾಂಟೀನ್ ಸ್ಟೇರ್ ಕೇಸ್ ಗ್ರಿಲ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪ್ರಿನ್ಸಿಪಾಲ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಿನ್ಸಿಪಾಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುನಗುಂದ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.