ಕಾರು-ಬಸ್ ನಡುವೆ ಡಿಕ್ಕಿ: ಸ್ಥಳದಲ್ಲೇ ಐವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಿರುಚ್ಚಿ ಜಿಲ್ಲೆಯ ಮನಪಾರೈಯ ವಯಂಬಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣವೇ ಬಸ್‌ ಪಲ್ಟಿಯಾಗಿದೆ. ಅದರಿಂದಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‌ನಲ್ಲಿದ್ದ 34 ಮಂದಿಗೆ ಗಾಯಗಳಾಗಿವೆ.

ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!