ಕಾರುಗಳ ನಡುವೆ ಡಿಕ್ಕಿ : ಸ್ಥಳದಲ್ಲೇ ಆರು ಮಂದಿ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಈ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧರ್ಮರಾಮ್ ಗಿಲಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಗರ್ಗ್ ಅವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಪ್ರಕಾರ, ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಹೊಡೆದಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ್ದವರ ಗುರುತನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಟ್ವಿಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!