ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನೂಜಿವೀಡು ಮಂಡಲಂ ಗೊಲ್ಲಪಲ್ಲಿಯಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೊಲ್ಲಪಲ್ಲಿಯ ಸಮೀಪದ ತಾಂಡವೊಂದರ ನಿವಾಸಿಗಳಾಗಿರುವ ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.