ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ: ಪೊಲೀಸ್‌ ಸಿಬ್ಬಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪೊಲೀಸ್‌ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುದೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಶ್ರೀನಿವಾಸ್ (46) ಮೃತ ಪೋಲಿಸ್ ಸಿಬ್ಬಂದಿ. ಸೋಲೂರು ಮೂಲದ ಮೃತ ಪೋಲಿಸ್ ಸಿಬ್ಬಂದಿ ಬೆಂಗಳೂರಿನ ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು.

ಸಿಬ್ಬಂದಿಯು ಡ್ಯೂಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಶ್ರೀನಿವಾಸ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೊಂದು ಬೈಕ್‌ ನ ಸವಾರ ನಾಪತ್ತೆಯಾಗಿದ್ದಾನೆ.

ಸದ್ಯ ಕುದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!