ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ಬೈಕ್ ಗಳ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ.
ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಾಯಗಳಾಗಿವೆ.
ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳದಿರುವುದು ಅಪಘಾತಕ್ಕೆ ಕಾರಣವಾಗಿದ್ದು, ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.