ಬಾಚಣಕಿ ಗ್ರಾ.ಪಂ. ವ್ಯಾಪ್ತಿಯ ನ್ಯಾಸರ್ಗಿ ಗ್ರಾಮದ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

ಹೊಸ ದಿಗಂತ ವರದಿ, ಯಲ್ಲಾಪುರ:

ಸಚಿವ ಶಿವರಾಮ ಹೆಬ್ಬಾರ್ ಅವರ ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಬಾಚಣಕಿ ಗ್ರಾಮಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಕಾಂಗ್ರೆಸ್ ತೊರೆದ ಬಿಜೆಪಿಯನ್ನು ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಸಚಿವ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರ ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಬಾಚಣಕಿ ಗ್ರಾಮಪಂಚಾಯತ ಅಧ್ಯಕ್ಷರಾದ ಸಂತೋಷ ಸಣ್ಣಮನಿ, ಪ್ರಮುಖರಾದ ಗುಡ್ಡಪ್ಪ ಕಾತೂರ, ಜಗದೀಶ ಕುರುಬರ, ಅರುಣ ಗೊಂದಳೆ, ಇಮ್ತಿಯಾಜ ನಾಕೇವಾಲೆ ಸೇರಿದಂತೆ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!