ಉಕ್ರೇನ್‌ನಿಂದ ಹಂಗೇರಿಗೆ ಬನ್ನಿ: ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ಅತೀ ವೇಗವಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಹಂಗೇರಿ ದೇಶದ ಬುಡಾಪೆಸ್ಟ್‌ಗೆ ಬಂದು ತಲುಪುವಂತೆ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಈಗಾಗಲೇ ಕೇಂದ್ರ ಸರ್ಕಾರ ‘ಆಪರೇಷನ್ ಗಂಗಾ’ ಮೂಲಕ ಉಕ್ರೇನ್​ ನಲ್ಲಿರುವ ಭಾರತೀಯರನ್ನು ಕರೆ ತರುವ ಕೆಲಸವನ್ನು ಮಾಡುತ್ತಿದ್ದು, ಇದೀಗ ಈ ಕಾರ್ಯಾಚರಣೆ ಕೊನೆಯ ಹಂತಕ್ಕೆ ಬಂದಿದೆ.
ಈ ಕುರಿತು ಟ್ವಿಟ್ ಮಾಡಿ ಮಾಹಿತಿ ನೀಡಿದ ಹಂಗೇರಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ, ಆಪರೇಷನ್ ಗಂಗಾ ವಿಮಾನಗಳ ಹಾರಾಟದ ಕೊನೆಯ ಹಂತ ಪ್ರಾರಂಭಿಸುತ್ತದೆ. ರಾಯಭಾರ ಕಚೇರಿಯಿಂದ ವ್ಯವಸ್ಥೆ ಮಾಡಿರುವುದನ್ನು ಹೊರತುಪಡಿಸಿ ಉಳಿದ ಕಡೆ ಇರುವ ಎಲ್ಲ ವಿದ್ಯಾರ್ಥಿಗಳು @Hungariacitycentre, Rakoczi Ut 90, Budapestಗೆ 10ರಿಂದ ಮಧ್ಯಾಹ್ನ 12ರೊಳಗೆ ತಲುಪಲು ಮನವಿ ಮಾಡಲಾಗಿದೆ ಎಂದು ತಿಳಿಸಿದೆ.
ಅದೇ ರೀತಿ, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳಿಗಾಗಿ ವಿವರವಾದ ಗೂಗಲ್ ಫಾರ್ಮ್ ಭರ್ತಿ ಮಾಡಬೇಕೆಂದು ಸೂಚಿಸಲಾಗಿದೆ. ಇದರ ಜತೆಗೆ ಗೂಗಲ್ ಫಾರ್ಮ್ ಲಿಂಕ್ ಅನ್ನೂ ಪೋಸ್ಟ್ ಮಾಡಲಾಗಿದೆ. ಎಲ್ಲರೂ ಸುರಕ್ಷಿತ ಮತ್ತು ಧೈರ್ಯವಾಗಿರಿ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!