ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಿಂದ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ.
ಎರಡು ಸಂಸ್ಥೆಗಳ ನಡುವಿನ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರವನ್ನು ತಿಳಿಸಲಾಗಿದೆ. ಬಾಂಗ್ಲಾದೇಶವು ಟೂರ್ನಿಗಾಗಿ ಭಾರತಕ್ಕೆ ಪ್ರಯಾಣಿಸಬೇಕಾಗುತ್ತದೆ. ಪ್ರಯಾಣಿಸದಿದ್ದರೆ ಅಂಕಗಳನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಚಾರದ ಬಗ್ಗೆ ಐಸಿಸಿಯಾಗಲಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧಿಕೃತವಾಗಿ ತಿಳಿಸಿಲ್ಲ. ಐಸಿಸಿಯ ನಡೆಯ ಬಗ್ಗೆ ಬಾಂಗ್ಲಾ ನಿರ್ಧಾರ ಮುಂದೆ ಪ್ರಕಟವಾಗಲಿದೆ.

